
ಕುವೈತ್: ಇರಾನ್-ಇಸ್ರೇಲ್-ಅಮೆರಿಕ ಸಂಘರ್ಷ ಇಡೀ ಮಧ್ಯಪ್ರಾಚ್ಯ ದೇಶಗಳಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ್ದು, ಕುವೈತ್ ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೈಲ ಟ್ಯಾಂಕ್ ಗೆ ಡ್ರೋನ್ ಅಪ್ಪಳಿಸಿದ ಹಿನ್ನೆಲೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರ ಪ್ರಕಟಿಸಿದೆ.


ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಆಂಗೀಕೃತ ತುರ್ತು ವಿಧಿವಿಧಾನಗಳನ್ನು ಅನುಸರಿಸಿದ್ದರಿಂದ ಈ ದಾಳಿಯಿಂದ ಯಾವುದೇ ಹೆಚ್ಚಿನ ಹಾನಿಯುಂಟಾಗಿಲ್ಲ ಎಂದು ಪ್ರಾಥಮಿಕ ಮಾಹಿತಿಗಳನ್ನು ಉಲ್ಲೇಖಿಸಿ ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯನ್ನು ಬೆಂಕಿ ಆರಿಸಲು ನಿಯೋಜಿಸಲಾಗಿದೆ ಎಂದು ಏಜೆನ್ಸಿಯ ವಕ್ತಾರ ಅಬ್ದುಲ್ ಅಲ್-ರಜ್ಹಿ ಹೇಳಿದ್ದಾರೆ.
