ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ʻಅತ್ಯುತ್ತಮ ವ್ಯವಸ್ಥಾಪಕ’ ಪ್ರಶಸ್ತಿಯ ಗರಿ!

ಮಂಗಳೂರು: ಕರಾವಳಿಯ ಸಹಕಾರಿ ರಂಗದ ಭೀಷ್ಮ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (SCDCC) ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಈಗ ಮತ್ತೊಂದು ಪ್ರತಿಷ್ಠಿತ ಗೌರವ ಒಲಿದು ಬಂದಿದೆ. ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ (MMA) ನೀಡುವ ‘ಎಂಎಂಎ-ಕೆವಿಕೆ ಅತ್ಯುತ್ತಮ ವ್ಯವಸ್ಥಾಪಕ ಪ್ರಶಸ್ತಿ-2025’ ಕ್ಕೆ ಇವರು ಭಾಜನರಾಗಿದ್ದಾರೆ.

ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಅಧ್ಯಕ್ಷರಾದ ಎಡ್ವರ್ಡ್ ಜೆ. ಕೋಯೆಲ್ಲೊ, ಮಾರ್ಚ್ 28, 2026ರಂದು ಸಾಯಂಕಾಲ 6:00 ಗಂಟೆಗೆ ಮಂಗಳೂರಿನ ಎಸ್‌ಡಿಎಂ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು ವಿವರಿಸಿದರು.

1997ರಿಂದ ಆರಂಭವಾದ ಈ ಪ್ರಶಸ್ತಿಯು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ವಿಶೇಷ ಕೊಡುಗೆ ನೀಡಿದ ಗಣ್ಯರಿಗೆ ನೀಡಲಾಗುತ್ತಾ ಬಂದಿದೆ. ಡಾ. ರಾಜೇಂದ್ರ ಕುಮಾರ್ ಅವರು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಂದಿರುವ ಕ್ರಾಂತಿಕಾರಿ ಬದಲಾವಣೆ ಮತ್ತು ಅವರ ದಕ್ಷ ವ್ಯವಸ್ಥಾಪನಾ ಶೈಲಿಯನ್ನು ಗುರುತಿಸಿ ಈ ಸಾಲಿನ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಂಎಂಎ ಅಧ್ಯಕ್ಷರಾದ ಎಡ್ವರ್ಡ್ ಜೆ. ಕೋಯೆಲ್ಲೊ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ. ಕೃಷ್ಣ ಶೆಟ್ಟಿ, ಕಾರ್ಯದರ್ಶಿ ಡಾ. ರಮ್ಯಾ ಶೆಟ್ಟಿ ಮತ್ತಿತರಿದ್ದರು.

error: Content is protected !!