ವಿಜಯನಗರ: ಟೊಮ್ಯಾಟೋ ಬೆಲೆಯಲ್ಲಿ ಏಕಾಏಕಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, ರೈತರು ಕಂಗಾಲಾಗಿದ್ದಾರೆ. 1000-1200 ರೂ. ಇದ್ದ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 100-80 ರೂ.ಗೆ ಕುಸಿದಿದೆ. ಬೆಲೆ ಕುಸಿತದಿಂದ ರೈತರು ಹಾಗೂ ಮಾರಾಟಗಾರರು ಹೆಚ್ಚಿನ ನಷ್ಟ ಅನುಭವಿಸುತ್ತಿದ್ದಾರೆ.

ಕೆಜಿಗೆ 20 ರಿಂದ 30 ರೂಪಾಯಿ ಇದ್ದ ದರ ದಿಢೀರನೆ, 2 ರಿಂದ 4 ಕೆಜಿ ಟೊಮ್ಯಾಟೋವನ್ನು ವ್ಯಾಪಾರಿಗಳು 20 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ಇದೀಗ ಸಾಲ ಮಾಡಿ ಟೊಮ್ಯಾಟೋ ಬೆಳೆದು ಮಾರುಕಟ್ಟೆಗೆ ತರೋ ರೈತರ ಪರಿಸ್ಥಿತಿ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.


ಇರಾನ್ – ಇಸ್ರೇಲ್ ಯುದ್ಧದಿಂದ ಬೇರೆ ದೇಶಗಳಿಗೆ ಟೊಮ್ಯಾಟೋ ರಫ್ತಾಗುತ್ತಿಲ್ಲ. ಅಲ್ಲದೇ ಸಿಲಿಂಡರ್ ಸಿಗದೇ ಹೋಟೆಲ್‍ಗಳು ಸರಿಯಾಗಿ ನಡೆಯದ ಹಿನ್ನೆಲೆ ಟೊಮ್ಯಾಟೋ ವ್ಯಾಪಾರ ಕುಸಿದಿದೆ. ಇಹಾಗಾಗಿ ಟೊಮ್ಯಾಟೋ ಬೆಲೆ ಸಹ ಕುಸಿದಿದೆ.