ಮಾ.28ಕ್ಕೆ ಬೆಂಗಳೂರಿನಲ್ಲಿ ತಡರಾತ್ರಿ 2 ಗಂಟೆ ವರೆಗೆ ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.28ರಂದು ನಡೆಯಲಿರುವ ಟಾಟಾ ಐಪಿಎಲ್‌ ಟಿ20 ಆರಂಭಿಕ ಪಂದ್ಯದ ಹಿನ್ನಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಪ್ರಯಾಣಿಕರಿಗೆ ಸುಲಭ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಎಲ್ಲಾ ಟರ್ಮಿನಲ್‌ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯಿಂದ ಮುಂದಿನ ದಿನದ ಮಧ್ಯರಾತ್ರಿ 2 ಗಂಟೆವರೆಗೆ ವಿಸ್ತರಿಸಿದೆ.

ಎಲ್ಲಾ ಟರ್ಮಿನಲ್‌ ನಿಲ್ದಾಣಗಳಿಂದ ಕೊನೆಯ ರೈಲುಗಳು ವೇಳಾಪಟ್ಟಿಯಂತೆ ಹೊರಡಲಿವೆ. ವೈಟ್‌ಫೀಲ್ಡ್(ಕಾಡುಗೋಡಿ) ನಿಂದ ರಾತ್ರಿ 12.30ಕ್ಕೆ ಮತ್ತು ಚೆಲ್ಲಘಟ್ಟ ದಿಂದ ರಾತ್ರಿ 12.45ಕ್ಕೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ ರಾತ್ರಿ 12.45ಕ್ಕೆ. ಬೊಮ್ಮಸಂದ್ರದಿಂದ ರಾತ್ರಿ 1ಕ್ಕೆ ಹಾಗೂ ಆರ್‌.ವಿ. ರಸ್ತೆಯಿಂದ ರಾತ್ರಿ 2ಕ್ಕೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್‌ ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 1.30ಕ್ಕೆ ಕೊನೆಯ ರೈಲು ಹೊರಡಲಿದೆ.

ಮೆಟ್ರೋ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸಲು ಐಪಿಎಲ್‌ ಪಂದ್ಯದ ಟಿಕೆಟ್‌ಗಳಲ್ಲಿ ನಮ್ಮ ಮೆಟ್ರೋ ಕ್ಯೂಆರ್‌ಕೋಡ್‌ ಎರಡು ಪ್ರಯಾಣಕ್ಕೆ (ಟು-ವೇ ಟ್ರಾವೆಲ್‌), ಐಪಿಎಲ್‌ ಟಿಕೆಟ್‌ ಮೇಲೆಯೇ ಮುದ್ರಿತವಾಗಿರುತ್ತದೆ ಅಥವಾ ಡಿಜಿಟಲ್‌ ಐಪಿಎಲ್‌ ಟಿಕೆಟ್‌ಗಳೊಂದಿಗೆ ಲಭ್ಯವಿರುತ್ತದೆ.

error: Content is protected !!