ರೌಡಿ ಶೀಟರ್ ಟ್ಯಾಬ್ಲೆಟ್ ಆರೀಫ್ ಹತ್ಯೆಗೆ ಬಳಸಿದ ಕಾರ್ ಬುಡೋಳಿಯಲ್ಲಿ ಪತ್ತೆ!!

ಮಂಗಳೂರು: ಇಂದು(ಮಾ.27) ನಸುಕಿನ ಜಾವ ನಗರದ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಮೇಲೆ ನಡೆದ ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್(46) ಯಾನೆ ಟ್ಯಾಬ್ಲೆಟ್ ಆರೀಫ್ ಹತ್ಯೆಯಲ್ಲಿ ಬಳಕೆ ಮಾಡಲಾದ ಇನ್ನೋವಾ ಕಾರ್ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಪತ್ತೆಯಾಗಿದೆ. ಪೊಲೀಸರು ಕಾರನ್ನು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ.

ತೊಕ್ಕೊಟ್ಟು: ರೌಡಿ ಶೀಟರ್ ಟ್ಯಾಬ್ಲೆಟ್ ಆರೀಫ್ ಬರ್ಬರ ಹತ್ಯೆ!

ನಸುಕಿನ 3.30ರ ಸುಮಾರಿಗೆ ಘಟನೆ ನಡೆದಿದ್ದು ಆರೀಫ್ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದಾನೆ. ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದ ಈತ ತನ್ನ ಬೈಕ್ ನಲ್ಲಿ ಧಕ್ಕೆಗೆ ಹಿಂಬಾಲಿಸಿದ್ದ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿತ್ತು.


ಇತ್ತೀಚಿಗೆ ನಡೆದಿದ್ದು ಟೊಪ್ಪಿ ನೌಫಲ್ ಹತ್ಯೆಗೆ ಪ್ರತೀಕಾರಕ್ಕಾಗಿ ಹತ್ಯೆ ನಡೆಸಿರಬೇಕೆಂದು ಶಂಕಿಸಲಾಗಿದೆ.

error: Content is protected !!