ಶಾಸಕ ಭರತ್ ಶೆಟ್ಟಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಪ್ರಕರಣದ ವಿರುದ್ಧ ಮಹಿಳಾ ಮೋರ್ಚಾ ದೂರು

ಮಂಗಳೂರು: ಶಾಸಕ ಡಾ. ವೈ ಭರತ್ ಶೆಟ್ಟಿಯವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರಮೀಳಾ ಮರೋಳಿ ಎಂಬ ಫೇಸ್ ಬುಕ್ ಪೇಜ್‌ನಿಂದ ಅವಹೇಳನಕಾರಿ ಪೋಸ್ಟ್ ಮತ್ತು ಸಮಾಜದಲ್ಲಿ ಅಶಾಂತಿ ಹುಟ್ಟಿಸುವಂತ ಬರಹವನ್ನು ಹಾಕಿದ್ದು ಇದರ ವಿರುದ್ದ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ವತಿಯಿಂದ ಸುರತ್ಕಲ್ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರು ಶ್ರೀಮತಿ ಲಕ್ಷ್ಮೀ ಚಂದ್ರಶೇಖರ್ ಆಚಾರ್ಯ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಮಹಿಳಾ ಮೋರ್ಚಾ ಉಪಾಧ್ಯಕ್ಷರು ಸುಲತಾ ಪೂಜಾರಿ, ಪ್ರಮೀಳಾ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಪವಿತ್ರ ನಿರಂಜನ್, ಮಹಾ ಶಕ್ತಿಕೇಂದ್ರ ಅಧ್ಯಕ್ಷರಾದ ದಿನಕರ್ ಇಡ್ಯಾ, ಸುನೀಲ್ ಕುಳಾಯಿ, ಕಾರ್ಯದರ್ಶಿ ಪ್ರಶಾಂತ್ ಆಚಾರ್ಯ ನಿಕಟ ಪೂರ್ವ ಜನಪ್ರತಿನಿಧಿಗಳಾದ ಶ್ರೀಮತಿ ವೇದಾವತಿ, ಶೋಭಾ ರಾಜೇಶ್, ಶ್ರೀಮತಿ ಸರಿತಾ ಶಶಿಧರ್, ನಯನ ಕೋಟ್ಯಾನ್ ಉಪಸ್ಥಿತರಿದ್ದರು.

error: Content is protected !!