
ರಾಮನಗರ: ಬೆಂಗಳೂರಿನ ಪಿಜಿಯಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಬೆಂಗಳೂರಿನಿಂದ ಕುಣಿಗಲ್ ಕಡೆ ಒಂದೇ ಬೈಕ್‌ನಲ್ಲಿ ಮೂವರು ನೈಟ್ ರೈಡ್ ಹೋಗುತ್ತಿದ್ದ ವೇಳೆ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಶುಕ್ರವಾರ(ಮಾ.27) ಮಾಗಡಿ ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ಅಭಿಷೇಕ್ (21), ಮನೋಜ್(21) ಮೃತ ವಿದ್ಯಾರ್ಥಿಗಳು.

ಅಪಘಾತದಲ್ಲಿ ನವೀನ್ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮೃತ ವಿದ್ಯಾರ್ಥಿಗಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.