ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಕಾರು ಡಿಕ್ಕಿ: ಎಸ್ಎಸ್ಎಲ್‌ಸಿ ವಿದ್ಯಾರ್ಥಿ ಸಾ*ವು

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಮೃತಪಟ್ಟ ಘಟನೆ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿ ನಡೆದಿದೆ.

ಚಿರಂತ್ (16) ಮೃತ ವಿದ್ಯಾರ್ಥಿ.

ಪರೀಕ್ಷೆ ಮುಗಿಸಿ ಬಸ್‍ನಲ್ಲಿ ಊರಿಗೆ ಬಂದಿದ್ದ ಬಾಲಕ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿಯಾಗಿದೆ. ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ.

ಅತಿಯಾದ ವೇಗ ಹಾಗೂ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

error: Content is protected !!