ಶಿವಮೊಗ್ಗ: ಜೋಳ ತುಂಬಿದ್ದ ಲಾರಿಯ ಚಕ್ರಕ್ಕೆ ಸಿಲುಕಿ ಬೈಕ್‌ನಲ್ಲಿ ಬರುತ್ತಿದ್ದ ದಂಪತಿ ಮೃತಪಟ್ಟ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಕೆ.ಜಂಕ್ಷನ್ ಬಳಿ ನಡೆದಿದೆ.

ಮೃತರನ್ನು ತರೀಕೆರೆ ತಾಲ್ಲೂಕಿನ ಬರಗೇನಹಳ್ಳಿ ಗೌಳಿಕ್ಯಾಂಪ್ನ ಬಾಬು (30) ಹಾಗೂ ಪತ್ನಿ ಹೆಸರು ತಿಳಿದುಬಂದಿಲ್ಲ.

ಜೋಳ ತುಂಬಿದ್ದ ಲಾರಿಯು ಶಿವಮೊಗ್ಗ ತರೀಕೆರೆ ಮಾರ್ಗವಾಗಿ ಹೊರಟಿದ್ದು, ದಂಪತಿ ಸಹ ಹೋಟೆಲ್ ಕೆಲಸ ಮುಗಿಸಿಕೊಂಡು ಬರುವಾಗ ಲಾರಿ ಹಿಂಬದಿಯ ಚಕ್ರಕ್ಕೆ ಸಿಲುಕಿದ್ದಾರೆ. ಬಾಬು ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.