ಬೈಕ್‌-ಬಸ್ ಮುಖಾಮುಖಿ ಡಿಕ್ಕಿ: ಸವಾರ ಸಜೀವ ದಹನ!!

ವಿಜಯಪುರ: ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಅದರ ರಭಸಕ್ಕೆ ಬೈಕ್ ಸವಾರ ಬಸ್ಸಿನಲ್ಲಿ ಸಿಲುಕಿಕೊಂಡು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ಇಂದು(ಮಾ.31) ನಡೆದಿದೆ.

ಸಿಂದಗಿ ತಾಲೂಕಿನ ಅಭಿಷೇಕ ಸಾಹೇಬಗೌಡ ನಾಗರಹಳ್ಳಿ(19) ಮೃತ ಸವಾರ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

error: Content is protected !!