ಬಸ್‌ಗೆ ಪಿಕಪ್ ಡಿಕ್ಕಿ; ಚಾಲಕ ಅಪಾಯದಿಂದ ಪಾರು

ಬಂಟ್ವಾಳ: ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿಯಾಗಿರುವ ಘಟನೆ ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ನಲ್ಲಿ ಇಂದು(ಮಾ.31) ಬೆಳಿಗ್ಗೆ ನಡೆದಿದೆ.

ಡಿಕ್ಕಿಯಿಂದ ಪಿಕಪ್ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!