ಬಂಟ್ವಾಳ: ಮಾದಕ ವಸ್ತುವನ್ನು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ತಂಡದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನರಿಕೊಂಬು ಗ್ರಾಮದ ನೆಹರೂ ನಗರ ಎಂಬಲ್ಲಿ ನಡೆದಿದೆ.

ಬಂಟ್ವಾಳ ಸಜಿಪ ಮೂಡ ನಿವಾಸಿ ಶಾಕೀರ್ (28 ) ವಶಕ್ಕೆ ಪಡೆದ ವ್ಯಕ್ತಿ.
ಮಾರ್ಚ್ 30 ರಂದು ಸಂಜೆ, ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಕಾ&ಸು ಸಂದೀಪ್ ಕುಮಾರ್ ಶೆಟ್ಟಿರವರಿಗೆ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ನೆಹರೂ ನಗರ ಎಂಬಲ್ಲಿ ಕೆಲವು ವ್ಯಕ್ತಿಗಳು ಮಾದಕ ವಸ್ತುವನ್ನು ಸೇವಿಸಿ ನಶೆ ಹೊಂದಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆಂದು ಮಾಹಿತಿ ಬಂದಿತ್ತು.

ಈ ಹಿನ್ನಲೆ , ಸಿಬ್ಬಂದಿಗಳೊಂದಿಗೆ ಮಾಹಿತಿ ಬಂದ ಸ್ಥಳಕ್ಕೆ ತೆರಳಿದಾಗ ಅಲ್ಲೇ ಮೈದಾನದಲ್ಲಿ ನಿಂತಿದ್ದ KA19-AE6387 ನೇ ನೋಂದಣಿಯ ಕಾರಿನಲ್ಲಿ ಜನರಿದ್ದು, ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ. ಅವರುಗಳ ಪೈಕಿ ಓರ್ವನನ್ನು ಹಿಡಿದು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಆತ ತಾನು ಹಾಗೂ ತನ್ನೊಂದಿಗಿದ್ದ ಅಸೀಪ್, ಸಿದ್ದಿಕ್ ಮತ್ತು ಇರ್ಷಾದ್ ಎಂಬವರುಗಳು ಒಟ್ಟಿಗೆ ಮಾದಕ ವಸ್ತು ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

ಈ ಬಗ್ಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಶಾಕೀರ್ ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣಾ ಅ.ಕ್ರ 41/2026 ಕಲಂ : 27(a) NDPS ACT 1985ಯಂತೆ ಪ್ರಕರಣ ದಾಖಲಾಗಿದೆ.
