ದಾವಣಗೆರೆ ಉಪಚುನಾವಣೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಸಭೆಯಲ್ಲಿ ಶಾಸಕ ಮಂಜುನಾಥ ಭಂಡಾರಿ ಭಾಗಿ

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಸಭೆಯಲ್ಲಿ ಉಸ್ತುವಾರಿ ಸಮಿತಿ ಸಂಚಾಲಕರಾದ ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಭಾಗಿಯಾದರು. ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್ ಅವರೊಂದಿಗೆ ಮಂಗಳವಾರ ಮಧ್ಯಾಹ್ನ ಉಪಚುನಾವಣೆಯ ಕ್ಯಾಂಪ್ ಕಚೇರಿಗೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಉಪಚುನಾವಣೆಯ ಉಸ್ತುವಾರಿ ಹಾಗೂ ಸಂಬಂಧಿತ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಿದರು. ಉಪಚುನಾವಣೆ ಪ್ರಚಾರಕ್ಕೆ ನಿಯೋಜಿಸಲಾದ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ಮತ್ತು ಹಿರಿಯ ನಾಯಕರೊಂದಿಗೆ ಸಭೆ ನಡೆಸಿದ ಭಂಡಾರಿ ಅವರು ಬಳಿಕ ಚುನಾವಣೆಗೆ ನಿಯೋಜಿಸಲಾದ ಎಲ್ಲಾ ವೀಕ್ಷಕರೊಂದಿಗೆ ಸಭೆ ನಡೆಸಿ ಚುನಾವಣೆಯ ರೂಪುರೇಷೆ ಕುರಿತು ಚರ್ಚಿಸಿದರು.


ದಾವಣಗೆರೆ ಡಿಸಿಸಿ ಮುಖಂಡರು ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಮುಖ ನಾಯಕರ ಸಭೆಯಲ್ಲಿ ಪಾಲ್ಗೊಂಡ ಅವರು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಸಚಿವರು, ಶಾಸಕರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಅನೇಕ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

error: Content is protected !!