ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾ*ವು

ಮೂಡುಬಿದಿರೆ: ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಇಬ್ಬರೂ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ(ಮಾ.31) ಸಂಜೆ ನಡೆದಿದೆ.

ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ ಮತ್ತು ಅವರ ಪುತ್ರ ಸೀನ ಮೃತರು.

ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ತಾಯಿ-ಮಗ ಇಬ್ಬರೂ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ನ ಹಿಂಭಾಗಕ್ಕೆ ಇವರ ಬೈಕ್ ವೇಗವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸೀನ ಅವರು ಆಸ್ಪತ್ರೆಗೆ ಸಾಗಿಸುವ ರಸ್ತೆಮಧ್ಯೆ ಸಾವನ್ನಪ್ಪಿದ್ದಾರೆ.

ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

error: Content is protected !!