ಬಂಟ್ವಾಳ: ಕಾರು ಡಿಕ್ಕಿಯಾಗಿ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿನ ಗುಳಿಗಜ್ಜ ಕಟ್ಟೆ ಬಳಿ ನಡೆದಿದೆ.

ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಗಾಯಗೊಂಡ ಮಹಿಳೆ.


ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆಯನ್ನು ದಾಟಿ ಗುಳಿಗಜ್ಜ ಕಟ್ಟೆಗೆ ಹಣ ಹಾಕಲು ಹೆದ್ದಾರಿ ರಸ್ತೆಯ ಅಂಚಿಗೆ ತಲುಪಿದಾಗ ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಬಂದ ಕಾರು ಡಿಕ್ಕಿಯಾಗಿ ಘಟನೆ ಸಂಭವಿಸಿದೆ.

ಗಾಯಾಳು ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.