ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದು ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿಯವರು ಯುವ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದ ಅವರು ಚುನಾವಣೆಯಲ್ಲಿ ಪ್ರತೀ ಮತವೂ ನಿರ್ಣಾಯಕವಾಗಿರುವುದರಿಂದ ಸಂಘಟಿತವಾಗಿ ಪ್ರಚಾರ ನಡೆಸುವಂತೆ ಸೂಚನೆ ನೀಡಿದರು.

ರಾಜ್ಯ ಸರಕಾರದ ಪಂಚ ಗ್ಯಾರಂಟಿ ಮತ್ತು ಇನ್ನಿತರ ಯೋಜನೆಗಳನ್ನು ಮತದಾರರಿಗೆ ತಲುಪಿಸುವಲ್ಲಿ ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕೆಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು.

ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ರಾಜ್ಯ ಸರ್ಕಾರದ ಸಚಿವರು, ವಿವಿಧ ಶಾಸಕರು ಹಾಗೂ ಯುವ ಕಾಂಗ್ರೆಸ್ ಸ್ಥಳೀಯ ಮತ್ತು ರಾಜ್ಯ ಮಟ್ಟದ ಮುಖಂಡರು ಉಪಸ್ಥಿತರಿದ್ದರು.
