ಏಪ್ರಿಲ್ 2ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಮಂಗಳೂರು: ಮಾರ್ಚ್ 31ರಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಇದೀಗ ಏಪ್ರಿಲ್ ಎರಡನೇ ವಾರದಲ್ಲಿ (ಏಪ್ರಿಲ್ 7 ಅಥವಾ 8) 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಏಪ್ರಿಲ್ ಎರಡನೇ ವಾರದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಮಂಡಳಿಯು ಮೊದಲು ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡು, ನಂತರ ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಿದೆ.

ಆನ್‌ಲೈನ್‌ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ನೋಡುವ ವಿಧಾನ:

  • ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  • “Submit” ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಕಾಣಿಸುತ್ತದೆ.

ಫಲಿತಾಂಶದ ನಂತರ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಏಪ್ರಿಲ್ 25 ರಿಂದ ಮೇ ಮೊದಲ ವಾರದವರೆಗೆ ಪೂರಕ ಪರೀಕ್ಷೆಗಳನ್ನು ನಡೆಸಲು ಮಂಡಳಿ ಚಿಂತನೆ ನಡೆಸಿದ ಎನ್ನಲಾಗಿದೆ.

error: Content is protected !!