ಕೋಲ್ಕತಾ: ಇಂದುನ ಐಪಿಎಲ್ ಪಂದ್ಯದಲ್ಲಿ ಆತಿಥೇಯ ಕೋಲ್ಕತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಹಣಾಹಣಿ ನಡೆಯಲಿದ್ದು, ಆರಂಭಿಕ ಪಂದ್ಯಗಳಲ್ಲಿ ಎರಡೂ ತಂಡಗಳು ಸೋಲನುಭವಿಸಿರುವ ಕಾರಣ, ಯಾವ ತಂಡ ಗೆಲುವಿನ ಖಾತೆ ತೆರೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇಶಾನ್ ಕಿಶನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ಈ ಆವೃತ್ತಿಯ ಉದ್ಘಾಟನ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಸೋತಿತ್ತು. ಈ ಟೂರ್ನಿಯ 2ನೇ ಪಂದ್ಯದಲ್ಲಿ ಅಜಿಂಕ್ಯ ರಹಾನೆ ನೇತೃತ್ವದ ಕೋಲ್ಕತಾ ನೈಟ್‌ರೈಡರ್ಸ್ ಸಹ 5 ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಮಣಿದಿತ್ತು. ಹೀಗಾಗಿ ಜಯಕ್ಕಾಗಿ ಎರಡೂ ತಂಡಗಳ ಮಧ್ಯೆ ಜಿದ್ದಾಜಿದ್ದಿ ಹೋರಾಟ ನಡೆಯುವ ನಿರೀಕ್ಷೆಯಿದೆ.

ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಒಟ್ಟು 30 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಹೈದರಾಬಾದ್ 10 ಬಾರಿ ಗೆದ್ದಿದ್ದರೆ, ಕೋಲ್ಕತಾ 20 ಬಾರಿ ಗೆದ್ದಿದೆ.

ಸಂಭಾವ್ಯ ತಂಡಗಳು:
ಕೋಲ್ಕತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ (ನಾಯಕ), ಫಿನ್ ಆ್ಯಲೆನ್, ಕ್ಯಾಮರಾನ್ ಗ್ರೀನ್, ಅಂಗ್‌ಕ್ರಿಶ್ ರಘುವಂಶಿ (ವಿ.ಕೀ.), ರಿಂಕು ಸಿಂಗ್, ರಮಣ್‌ದೀಪ್ ಸಿಂಗ್, ಅನುಕೂಲ್ ರಾಯ್, ಸುನೀಲ್ ನಾರಾಯಣ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಬ್ಲೆಸ್ಸಿಂಗ್ ಮುಜರಬಾನಿ.

ಸನ್ ರೈಸರ್ಸ್ ಹೈದರಾಬಾದ್: ಟ್ರ್ಯಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ನಾಯಕ – ವಿ.ಕೀ.), ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ, ಅನಿಕೇತ್ ವರ್ಮಾ, ಹರ್ಷ್ ದುಬೆ, ಹರ್ಷಲ್ ಪಟೇಲ್, ಜಯದೇವ್ ಉನಾದ್ಕತ್, ಈಶಾನ್ ಮಾಲಿಂಗ.