ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ; ನೊಂದ ವಿದ್ಯಾರ್ಥಿನಿ ನೇಣಿಗೆ ಶರಣು

ಚಿತ್ರದುರ್ಗ: ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡಿದ್ದಕ್ಕೆ ಮನನೊಂದ ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನ ಬಿಎಎಂಎಸ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ.

ನಿಖಿತಾ (23) ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ.

ಪ್ರಾಧ್ಯಾಪಕ ಡಾ. ರಾಜು ಅವರೊಂದಿಗೆ ಸಂಬಂಧವಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿ, ತನ್ನ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದರಿಂದ ಮನನೊಂದು ನಿಖಿತಾ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಡೆತ್‌ನೋಟ್‌ನಲ್ಲಿ ಡಾ.ರಾಜು, ಪತ್ನಿ ನಿಶಾ ಹಾಗೂ ಕೆಲ ವಿದ್ಯಾರ್ಥಿನಿಯರ ಹೆಸರು ಬರೆದಿಟ್ಟು ನಿಖಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನೆಗೆ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಧ್ಯಾಪಕ ರಾಜು, ಪತ್ನಿ ನಿಶಾ ಮತ್ತು ಡೆತ್ ನೋಟ್‌ನಲ್ಲಿ ಹೆಸರಿಸಲಾದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

error: Content is protected !!