ಹಿಂದಿಗೆ ಅಂಕದ ಬದಲಿಗೆ ಗ್ರೇಡ್: ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬೆಂಗಳೂರಿನ ಹೆಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಕೆ ಮಾಡಿದ್ದಾರೆ.

ಅರ್ಜಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು, ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದಾರೆ.

ಅರ್ಜಿಯಲ್ಲಿ ಸರ್ಕಾರದ ಕ್ರಮ ಸರಿಯಾಗಿಲ್ಲ. ಯಾವುದೇ ಶೈಕ್ಷಣಿಕ ಬದಲಾವಣೆ ಮಾಡುವ ಮುನ್ನ ಶಿಕ್ಷಣ ತಜ್ಞರ ಜೊತೆಯಲ್ಲಿ ಸಭೆ ಮಾಡಬೇಕು, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದುಕೊಳ್ಳಬೇಕು. ಆದರೆ ರಾಜ್ಯ ಸರ್ಕಾರ ಯಾವುದೇ ಪ್ರಕ್ರಿಯೆ ಮಾಡದೇ ಏಕಪಕ್ಷೀಯ ನಿರ್ಧಾರ ಮಾಡಿರೋದು ಸೂಕ್ತ ಅಲ್ಲ ಎಂದು ದೂರಿದ್ದಾರೆ. ಹೈಕೋರ್ಟ್ನಲ್ಲಿ ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

error: Content is protected !!