
ಚಾಮರಾಜನಗರ: ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ.

ನದಿಯಾ(19), ನಾಗೇಂದ್ರ(21) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಪರಸ್ಪರ ಪ್ರೀತಿಸುತ್ತಿದ್ದ ನಾಗೇಂದ್ರ ಹಾಗೂ ನದಿಯಾ ಜೋಡಿ ಮನೆಬಿಟ್ಟು ಹೋಗಿದ್ದರು. ಹೀಗಾಗಿ 3 ದಿನದ ಹಿಂದೆ ನಾಗೇಂದ್ರ, ನದಿಯಾಳನ್ನು ಕರೆದುಕೊಂಡು ತನ್ನ ಅಜ್ಜನ ಊರು ಪೊನ್ನಾಚಿಗೆ ಕರೆದುಕೊಂಡು ಹೋಗಿದ್ದ. ಇತ್ತ ನದಿಯಾ ಕುಟುಂಬಸ್ಥರು ಆತಂಕಗೊಂಡು ಎಲ್ಲೆಡೆ ಹುಡುಕಾರಿದ್ದಾರೆ. ಆದರೂ ಪತ್ತೆಯಾಗಿಲ್ಲ ಅಂತ ಕೊನೆಗೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಶ್ ದಾಖಲಿಸಿದ್ದಾರೆ.

ಕೇಸ್ ದಾಖಲಾದ ವಿಚಾರ ತಿಳಿದು ನಾಗೇಂದ್ರ ಹಾಗೂ ನದಿಯಾ ಹೆದರಿ ಜತೆಯಲ್ಲೇ ಸಾಯುಲು ನಿರ್ಧರಿಸಿ ನೇಣಿಗೆ ಶರಣಾಗಿದ್ದಾರೆ.
ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮಲೆ ಮಹದೇಶ್ವರಬೆಟ್ಟ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಶವಗಳ ಸ್ಥಳಾಂತರ ಮಾಡಲಾಗಿದೆ.