ಇಂದು ಕರಾವಳಿಯಲ್ಲಿ ಗುಡುಗು ಸಹಿತ ಗಾಳಿ ಮಳೆ ಸಾಧ್ಯತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುರುವಾರ(ಎ.02) ಸಂಜೆ ಬಳಿಕ ಉತ್ತಮ ಮಳೆಯಾಗಿದೆ. ಉಡುಪಿ ನಗರ, ಮಣಿಪಾಲ, ಮಲ್ಪೆ, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ, ಹೆಬ್ರಿ ಈದು, ಬಜಗೋಳಿ, ಅಜೆಕಾರು, ಅಂಡಾರು ಭಾಗಗಳಲ್ಲಿ ಕೆಲಕಾಲ ಬಿಟ್ಟುಬಿಟ್ಟು ರಾತ್ರಿವರೆಗೂ ಮಳೆ ಸುರಿದಿದೆ.

ಮಂಗಳೂರಿನಲ್ಲಿ 33.8 ಡಿ. ಸೆ. ಗರಿಷ್ಠ ತಾಪಮಾನ ದಾಖಲಾಗಿ ಎಂದಿಗಿಂತ 0.3 ಡಿ. ಸೆ. ಇಳಿಕೆ ಮತ್ತು 24.7 ಡಿ. ಸೆ. ಕನಿಷ್ಠ ತಾಪಮಾನ ದಾಖಲಾಗಿ ಎಂದಿಗಿಂತ 0.1 ಡಿ.ಸೆ. ಉಷ್ಣಾಂಶ ಏರಿಕೆ ಕಂಡಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ. 30ರಿಂದ 40 ಕಿ. ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.

error: Content is protected !!