
ಬಂಟ್ವಾಳ: ವ್ಯಕ್ತಿಯೋರ್ವ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ(ಎ.02) ನಡೆದಿದೆ.

ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್(38) ಮೃತ ವ್ಯಕ್ತಿ.

ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ರಮೇಶ್ ಮಾದಕ ವಸ್ತುಗಳ ಸೇವನೆಗೆ ವ್ಯಸನಿಯಾಗಿದ್ದ. ಈತ ಮದುವೆಯಾಗಿಲ್ಲ ಎಂಬ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.