ಅಕ್ರಮವಾಗಿ ಜಾನುವಾರು ಸಾಗಾಟ; 18 ಜಾನುವಾರು ವಶಕ್ಕೆ, ಓರ್ವ ಆರೋಪಿ ಅರೆಸ್ಟ್‌

ಕಡಬ: ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವವನ್ನು ಕಡಬ ಠಾಣಾ ಸಬ್ ಇನ್ಸ್‌ಪೆಕ್ಟ‌ರ್ ಜಂಬೂರಾಜ್ ಮಹಾಜನ್ ನೇತೃತ್ವದ ಪೊಲೀಸರ ತಂಡ ಪೊಲೀಸರ ತಂಡ ಬಂಧಿಸಿದ್ದು, 18 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಹೊಸೂರು ಮೂಲದ ಅಕ್ರಮ್ ಪಾಷಾ ಬಂಧಿತ ಆರೋಪಿ. ಮತ್ತೋರ್ವ ಪರಾರಿಯಾಗಿದ್ದಾನೆ.

ಕಂಟೇನರ್‌ನಲ್ಲಿ ಸುಮಾರು 18 ಜಾನುವಾರುಗಳನ್ನು ಅಮಾನುಷವಾಗಿ ಸಾಗಾಟ ಮಾಡಲಾಗುತ್ತಿರುವುದು ಕಂಡುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

error: Content is protected !!