
ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಶರಣ್ಯ(36) ನಾಪತ್ತೆಯಾದ ಮಹಿಳೆ.
ಶರಣ್ಯ ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿ ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಟ್ರೆಕ್ಕಿಂಗ್ ಹೊರಟಿದ್ದರು ಎಂದು ಹೇಳಲಾಗಿದೆ.

ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಇರುವುದರಿಂದ ಬೇರೆ ಪ್ರವಾಸಿಗರ ಜೊತೆಯಲ್ಲಿ ಕಳುಹಿಸಲಾಗಿದೆ. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ ಕಾರಣ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ವಿಷಯ ತಿಳಿಸಿದ್ದಾರೆ.


ಈ ಬಗ್ಗೆ ಅಲ್ಲಿಯ ಸ್ಥಳೀಯ ನಿವಾಸಿ ಕುಡಿಯರ ಮುತ್ತಪ್ಪ ಎಂಬವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಅರಣ್ಯ ಇಲಾಖೆಯವರು ಹಾಗೂ ಪೊಲೀಸರು, ಗ್ರಾಮಸ್ಥರು ಬೆಟ್ಟದಲ್ಲೆಲ್ಲ ಹುಡುಕಾಡಿದರೂ ಮಹಿಳೆಯ ಸುಳಿವು ದೊರೆತಿಲ್ಲ. ಇಂದು ಮತ್ತೆ ಮಹಿಳೆಗಾಗಿ ಶೋಧ ನಡೆಸಲಾಗುತ್ತಿದೆ. ಮಹಿಳೆಯ ಮೊಬೈಲ್ ಕೇರಳ ನೆಟ್ವರ್ಕ್‌ನಲ್ಲಿರುದಾಗಿ ತಿಳಿದು ಬಂದಿದ್ದು, ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ, ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬೆಟ್ಟದ ಪ್ರದೇಶದಲ್ಲಿ ಬೀಡುಬಿಟ್ಟಿದ್ದಾರೆ.