ಕೊಣಾಜೆ: ಬೈಕೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ಕೊಣಾಜೆ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ನಡೆದಿದೆ.

ನಡುಪದವಿನ ಸುಶಾಂತ್ (23 ) ಗಂಭೀರ ಗಾಯಗೊಂಡ ಯುವಕ.


ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ಸಂದರ್ಭದಲ್ಲಿ ಯುವಕನ ತಲೆಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕೂಡಲೇ ಆತನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಚಾಲಕ ಬೈಕ್ ಗೆ ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದು, ಬಳಿಕ ಪೊಲೀಸರು ಲಾರಿಯನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.