
ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆ ಪ್ರಯುಕ್ತ ಮಂಜೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಶಾಸಕರಾದ ವೇದವ್ಯಾಸ ಕಾಮತ್ ಅವರು ಮನೆ ಮನೆಗೆ ತೆರಳಿ ಬಿರುಸಿನ ಪ್ರಚಾರ ನಡೆಸಿದರು.

ಕುಂಬ್ಳೆ ಪಂಚಾಯತ್ ವ್ಯಾಪ್ತಿಯ ಕುಂಟಗೇರಡ್ಕದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕಾಲೋನಿ ಸೇರಿದಂತೆ ಹಲವೆಡೆ ಮತಯಾಚನೆ ನಡೆಸಿದ ಅವರು, ಕೇರಳದಲ್ಲಿ ಎನ್ ಡಿ ಎ ನೇತೃತ್ವದ ಸರ್ಕಾರದ ಅಗತ್ಯತೆ ಬಗ್ಗೆ ಮನವರಿಕೆ ಮಾಡಿದರು. ಕೇರಳದ ಆಡಳಿತ ಪಕ್ಷದ ದುರಾಡಳಿತದಿಂದ ಬೇಸತ್ತಿರುವ ಜನತೆ, ಈ ಬಾರಿ ನಮ್ಮ ಪಕ್ಷದ ಅಭ್ಯರ್ಥಿಯ ಪರ ಒಲವು ಹೆಚ್ಚಿಸಿಕೊಂಡಿದ್ದು ಗೆಲುವು ಖಚಿತ ಎಂಬ ವಾತಾವರಣ ನಿರ್ಮಾಣವಾಗಿದೆ. ಮತದಾರರು ಪ್ರಧಾನಿ ಮೋದಿಯವರ ಅಭಿವೃದ್ಧಿ ಮಂತ್ರ ಹಾಗೂ ಕೆ. ಸುರೇಂದ್ರನ್ ಅವರ ನಾಯಕತ್ವದ ಮೇಲೆ ಅಪಾರ ಭರವಸೆ ಇಟ್ಟಿದ್ದಾರೆ ಎಂದರು.

ಈ ವೇಳೆ ರಮೇಶ್ ಹೆಗ್ಡೆ, ಪ್ರವೀಣ್ ನಿಡ್ಡೆಲ್, ಸೇರಿದಂತೆ ಹಲವು ಸ್ಥಳೀಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

