ಬಸ್‌ಗಳು ಮುಖಾಮುಖಿ ಡಿಕ್ಕಿ; 40ಕ್ಕೂ ಹೆಚ್ಚು ಮಂದಿಗೆ ಗಾಯ

ಶಿರಸಿ: ಕುಮಟಾ–ಶಿರಸಿ ಹೆದ್ದಾರಿಯ ಕೊಲಗಿಬೀಸ್ ಗ್ರಾಮದಲ್ಲಿ ಬಳಿ ವೇಗವಾಗಿ ಸಂಚರಿಸುತ್ತಿದ್ದ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪ ಶುಕ್ರವಾರ(ಎ.3) ಮಧ್ಯಾಹ್ನ ಸಂಭವಿಸಿದ್ದು, ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 40 ಮಂದಿ ಗಾಯಗೊಂಡಿದ್ದಾರೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಕುಮಟಾದಿಂದ ಶಿರಸಿಗೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.

 

error: Content is protected !!