ಕೊಣಾಜೆ: ಬೈಕೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ(ಎ.05) ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಗರದ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ನಡೆದಿದೆ.

ನಡುಪದವು ಅಂಬೇಡ್ಕರ್ ಕಾಲನಿಯ ನಿವಾಸಿ ಸುಶಾಂತ್(23 ) ಮೃತಪಟ್ಟ ಯುವಕ.
ಕಳೆದ ಗುರುವಾರದಂದು ಕಂಬಳಪದವು ಬಳಿ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ಸಂದರ್ಭ ತಲೆಗೆ ಗಂಭೀರವಾದ ಗಾಯವಾಗಿತ್ತು. ಕೂಡಲೇ ಆತನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾನೆ. ಇನ್ನು ಲಾರಿ ಚಾಲಕ ಬೈಕ್ ಗೆ ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.
ಬಳಿಕ ಪೊಲೀಸರು ಲಾರಿಯನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದರು.