ಶಾಸಕ ಮಂಜುನಾಥ ಭಂಡಾರಿ ನೇತೃತ್ವದಲ್ಲಿ ಡಾ. ಬಾಬು ಜಗಜೀವನ್ ರಾಮ್ ಜನ್ಮದಿನಾಚರಣೆ

ದಾವಣಗೆರೆ: ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನಾಚರಣೆಯನ್ನು ದಾವಣಗೆರೆಯ ಕ್ಯಾಂಪ್ ಕಚೇರಿಯಲ್ಲಿ ಭಾನುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಮೇಲುಸ್ತುವಾರಿಗಳು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಬಾಬೂಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಂಜುನಾಥ ಭಂಡಾರಿ ಅವರು, “ದೇಶದ ಕೃಷಿ ವಲಯ ಹಾಗೂ ಶೋಷಿತ ಸಮುದಾಯಗಳ ಏಳಿಗೆಗಾಗಿ ಬಾಬು ಜಗಜೀವನ್ ರಾಮ್ ಅವರು ನೀಡಿದ ಕೊಡುಗೆ ಸ್ಮರಣೀಯ. ಅವರ ಸಾಮಾಜಿಕ ನ್ಯಾಯದ ಹಾದಿ ಇಂದಿನ ಪೀಳಿಗೆಗೆ ಮಾದರಿ,” ಎಂದರು.

ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವ ಮಾಂಕಾಳ್ ವೈದ್ಯ ಅವರು ಪಾಲ್ಗೊಂಡು ನಮನ ಸಲ್ಲಿಸಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಪ್ರಚಾರದ ನಡುವೆಯೂ ನಡೆದ ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಮಟ್ಟದ ಹಿರಿಯ ನಾಯಕರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

error: Content is protected !!