RCB vs CSK ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ; 7 ಮಂದಿಯ ವಿರುದ್ಧ FIR

ಬೆಂಗಳೂರು: ಆರ್‌ಸಿಬಿ ಹಾಗೂ ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಏಳು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಜಗದೀಶ್, ಸತ್ಯನಾರಾಯಣ, ಹರ್ಷ, ವಿನಯ್, ಶಾಹೀದ್, ಲಿಖಿತ್, ಪುನೀತ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾದವರು.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹೆಚ್ಚಿನ ಹಣಕ್ಕಾಗಿ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದರು. ಈ ವೇಳೆ ಸಿಸಿಬಿ ಪೊಲೀಸರು ಮಾನಿಟರಿಂಗ್ ಮಾಡಿದ್ದು, ಆರೋಪಿಗಳು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದು, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರತ್ಯೇಕ ಮೂರು ಎಫ್‌ಐಆರ್‌ಗಳು ದಾಖಲಾಗಿವೆ.

error: Content is protected !!