ಸ್ಕೂಟರ್‌ ಕಳವು ಪ್ರಕರಣ: ಬಾವ, ಇರ್ಷಾದ್‌ ಸೆರೆ

ಬಂಟ್ವಾಳ: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಕಳವು ಮಾಡಿದ್ದ ಸುಮಾರು 50,000 ರೂಪಾಯಿ ಮೌಲ್ಯದ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಮತ್ತು ಬಿ. ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂದು ಗುರುತಿಸಲಾಗಿದೆ. ಕಳೆದ ಮಾರ್ಚ್ 21ರಂದು ಪರ್ಲಿಯಾದ ವಸತಿಗೃಹವೊಂದರ ಶೆಡ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳ್ಳತನವಾಗಿತ್ತು. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ (ಅ.ಕ್ರ :37/2026, ಕಲಂ:303(2) BNS) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆಯ ನಂತರ ತೀವ್ರ ತನಿಖೆ ಕೈಗೊಂಡ ಪೊಲೀಸರು, ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಗಳಿಂದ ಸ್ಕೂಟರ್ ವಶಪಡಿಸಿಕೊಳ್ಳಲಾಗಿದ್ದು, ಬಂಟ್ವಾಳ ನಗರ ಠಾಣಾ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

error: Content is protected !!