ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಎಪ್ರಿಲ್‌ 9ರಂದು ಪ್ರಕಟವಾಗುವ ಸಾಧ್ಯತೆ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮೂಲಗಳು ತಿಳಿಸಿವೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯದಲ್ಲಿ ನಡೆದಿದ್ದು, 7,10,363ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಮೊದಲಿನ ತಾತ್ಕಾಲಿಕ ವೇಳಾಪಟ್ಟಿಯಂತೆ ಇಂದು(ಎ.7) ಫಲಿತಾಂಶ ಪ್ರಕಟವಾಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆಯನ್ನು ಮುಂದೂಡಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಏಪ್ರಿಲ್ 9ರಂದು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಮಂಡಳಿಯು ಮೊದಲು ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡು, ನಂತರ ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಿದೆ.

ಆನ್‌ಲೈನ್‌ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ನೋಡುವ ವಿಧಾನ:

  • ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ “Karnataka 2nd PUC Result 2026″ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  • ‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.

ಫಲಿತಾಂಶದ ನಂತರ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಏಪ್ರಿಲ್ 25 ರಿಂದ ಮೇ ಮೊದಲ ವಾರದವರೆಗೆ ಪೂರಕ ಪರೀಕ್ಷೆಗಳನ್ನು ನಡೆಸಲು ಮಂಡಳಿ ಚಿಂತನೆ ನಡೆಸಿದ ಎನ್ನಲಾಗಿದೆ.

error: Content is protected !!