ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

ಬೀದರ್: ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ಜಿಲ್ಲೆಯ ಭಾಲ್ಕಿಯ ಜಾಂತಿ ಗ್ರಾಮದಲ್ಲಿ ನಡೆದಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಹೊಸ ಮನೆಯ ಮೇಲ್ಛಾವಣಿ ಹಾಕಿದ ಖುಷಿಗೆ ರಾಜಕುಮಾರ್ ಎಂಬುವವರು ಗ್ರಾಮಸ್ಥರಿಗೆ ಊಟ ಹಾಕಿಸಿದ್ದರು. ಇದನ್ನು ತಿಂದ ಗ್ರಾಮಸ್ಥರು ಬೆಳಗಿನ ಜಾವ ಫುಡ್ ಪಾಯಿಸನ್ ಆಗಿ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದಾರೆ. 40ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದು, 5 ರಿಂದ 6 ಜನರ ಸ್ಥಿತಿ ಗಂಭೀರವಾಗಿದೆ.

ಆಂಬುಲೆನ್ಸ್ ಮೂಲಕ ಜನರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ಕರೆತರಲಾಗಿದ್ದು, 10 ರಿಂದ 15 ಜನರಿಗೆ ಬ್ರಿಮ್ಸ್‌ನ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಮನೆಯ ಮಾಲೀಕರಾದ ರಾಜಕುಮಾರ್, ಸಂಗೀತಾ, ಈರಮ್ಮ, ಶಿವಾನಂದ್ ಮತ್ತು ಅಂಬಿಕಾ ಸೇರಿದಂತೆ ಹಲವರ ಸ್ಥಿತಿ ಕೂಡ ಗಂಭೀರವಾಗಿದ್ದು, ಉಳಿದ ಜನರಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

error: Content is protected !!