ಪ್ರವಾಸಕ್ಕೆಂದು ಪೋಷಕರ ಜತೆ ಬಂದಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ!

ಚಿಕ್ಕಮಗಳೂರು: ಪೋಷಕರೊಂದಿಗೆ ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಗೆ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಬುಧವಾರ(ಎ.07) ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ.

ಕೇರಳ ರಾಜ್ಯದ ಪಾಲಕ್ಕಾಡ್ ಮೂಲದ ಶ್ರೀ ನಂದಾ(14) ನಾಪತ್ತೆಯಾದ ಬಾಲಕಿ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಪೋಷಕರೊಂದಿಗೆ ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಈ ವೇಳೆ ಚಂದ್ರದ್ರೋಣ ಪರ್ವತ ಸರಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಕಾಣೆಯಾಗಿರುವುದು ತಿಳಿದುಬಂದಿದೆ. ಬಾಲಕಿ ಕಾಣೆಯಾಗುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಯಾವುದೇ ಸುಳಿವು ಸಿಗಲಿಲ್ಲ.

ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ರಾತ್ರಿ ಪೂರ್ತಿ ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಸಂಯುಕ್ತವಾಗಿ ಶೋಧ ಕಾರ್ಯ ನಡೆಸಿದರು. ಇಂದೂ ಡ್ರೋನ್ ಸಹಾಯದಿಂದ ಹುಡುಕಾಟ ಮುಂದುವರಿದಿದ್ದು, ಇದು ಸಂಪೂರ್ಣ ಹುಲ್ಲುಗಾವಲು ಹಾಗೂ ಇಳಿಜಾರು ಪ್ರದೇಶಗಳಿಂದ ಕೂಡಿರುವ ಈ ಪ್ರದೇಶವಾಗಿದೆ.

error: Content is protected !!