ಪ್ರೇಯಸಿಯ ಸಾವಿನ ಸುದ್ದಿ ಕೇಳಿ ಮನನೊಂದ ಪ್ರಿಯಕರನೂ ನೇಣಿಗೆ ಶರಣು

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಪ್ರಿಯಕರನೂ ನೇಣಿಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿಯ ಅಸ್ಕಿ ಗ್ರಾಮದ ಬನಹಟ್ಟಿ ನಗರದಲ್ಲಿ ನಡೆದಿದೆ.

ಪವಿತ್ರಾ ಒಂಟಿ(19), ಕಾರ್ತಿಕ್ ನಾಯಕ್(19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಪವಿತ್ರಾ ಬನಹಟ್ಟಿಯ ಕೆಹೆಚ್‌ಡಿಸಿ ಕಾಲೋನಿ ನಿವಾಸಿಯಾಗಿದ್ದಳು. ಕಾರ್ತಿಕ್ ಅಸ್ಕಿ ಗ್ರಾಮದ ಹುಡುಗ. ಮಂಗಳವಾರ ಇವರಿಬ್ಬರ ಮಧ್ಯೆ ವೈಮನಸ್ಸಿನಿಂದ ಜಗಳ ನಡೆದಿತ್ತು. ಇದಾದ ಬಳಿಕ ಮನನೊಂದು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಈ ಸುದ್ದಿ ಕೇಳಿದ ನಂತರ ಮನನೊಂದು ಪ್ರಿಯಕರ ಕಾರ್ತಿಕ್ ಕೂಡ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!