ದಕ್ಕೆ ನಾಸಿರ್‌ ಶವವಾಗಿ ಶವವಾಗಿ ಪತ್ತೆ- ಕೊಲೆಗೈದು ನದಿಗೆಸೆದಿರುವ ಶಂಕೆ

ಮಂಗಳೂರು: ತೊಕ್ಕೊಟ್ಟಿನ ರೌಡಿಶೀಟರ್ ಟ್ಯಾಬ್ಲೆಟ್‌ ಆರಿಫ್ ಹುಸೇನ್ ಹತ್ಯೆಯ ನೆನಪು ಮಾಸುವ ಮುನ್ನವೇ, ಈಗ ಮಂಗಳೂರಿನ ಮೀನುಗಾರಿಕಾ ದಕ್ಕೆಯ ಬಳಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕಳ್ಳತನ, ದರೋಡೆಯಂತಹ ಹತ್ತಾರು ಕೃತ್ಯಗಳಲ್ಲಿ ಭಾಗಿಯಾಗಿದ್ದ ʻದಕ್ಕೆ ನಾಸಿರ್’ ಎಂಬಾತನ ಶವ ಇಂದು ನದಿಯಲ್ಲಿ ಪತ್ತೆಯಾಗಿದೆ!

ದಕ್ಕೆಯ ನಿರ್ಮಾಣ ಹಂತದ ಕಟ್ಟಡದ ಬಳಿ ನದಿಯಲ್ಲಿ ಶವವೊಂದು ತೇಲುತ್ತಿರುವುದನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪರಿಶೀಲಿಸಿದಾಗ ಇದು ಕಳವು, ದರೋಡೆ ಪ್ರಕರಣಗಳ ಆರೋಪಿ, ಕುಖ್ಯಾತ ವ್ಯಕ್ತಿ ನಾಸೀರ್ ಯಾನೆ ದಕ್ಕೆ ನಾಸಿರ್ ಶವ ಎಂಬುದು ದೃಢಪಟ್ಟಿದೆ. ಮೃತದೇಹದ ಹಣೆ ಮತ್ತು ದೇಹದ ವಿವಿಧ ಭಾಗಗಳಲ್ಲಿ ಗಂಭೀರ ಗಾಯಗಳ ಗುರುತುಗಳಿದ್ದು, ಇದನ್ನು ಕಂಡರೆ ನಾಸಿರ್‌ನನ್ನು ಹತ್ಯೆಗೈದು ನದಿಗೆ ಎಸೆದಿರುವ ಬಲವಾದ ಶಂಕೆ ವ್ಯಕ್ತವಾಗಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕ ಮೂಲದ ಕೆಲವರು ʻಮೊಬೈಲ್ ಕಳುವಾಗಿದೆ’ ಎಂಬ ನೆಪದಲ್ಲಿ ಹುಡುಕಾಟ ನಡೆಸುತ್ತಿದ್ದರು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸ್‌ ಆಯುಕ್ತ ಸುಧೀರ್‌ ರೆಡ್ಡಿ ತಿಳಿಸಿದ್ದಾರೆ. ಈಗಾಗಲೇ ಪೊಲೀಸರ ಕೈಗೆ ಕೆಲವು ಅನುಮಾನಾಸ್ಪದ ವ್ಯಕ್ತಿಗಳ ವಿಡಿಯೋ ಲಭ್ಯವಾಗಿದ್ದು, ತನಿಖೆ ತೀವ್ರಗೊಂಡಿದೆ.

ಪಾಂಡೇಶ್ವರ (ದಕ್ಷಿಣ) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಸ್ತುತ ಉರ್ವಾ ಪೊಲೀಸ್ ಇನ್ಸ್‌ಪೆಕ್ಟರ್ ತನಿಖೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.

error: Content is protected !!