
ಹುಬ್ಬಳ್ಳಿ: ಮುಸ್ಲಿಂ ಸಮುದಾಯದ ವಿವಾಹಿತ ವ್ಯಕ್ತಿ ತನ್ನ ಮಗಳನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಜೊತಗೆ ಮನೆ ಖರೀದಿಸಲು ನೀಡಿದ್ದ ಹತ್ತು ಲಕ್ಷ ಹಣ ಕೂಡಾ ತೆಗೆದುಕೊಂಡು ಹೋಗಿದ್ದಾನೆ. ಇದೀಗ ಹಣವೂ ಇಲ್ಲ, ಮಗಳೂ ಇಲ್ಲ ಎಂಬಂತಾಗಿದೆ. ದಯವಿಟ್ಟು ನನ್ನ ಹುಡುಕಿ ಕೊಡಿ ಎಂದು ತಾಯಿಯೊಬ್ಬರು ಮನವಿ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಮಗಳಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.

ಧಾರವಾಡದ ಕೆಲಗೇರಿಯ ನಿವಾಸಿ ಇಪ್ಪತ್ತೆರಡು ವರ್ಷದ ತಂಗೆಮ್ಮಾ ಎಂಬ ಯುವತಿ ಮನೆ ಮುಂಭಾಗದ ನಿವಾಸಿ ಕಾರು ಚಾಲಕನಾಗಿದ್ದ ಮುಸ್ಲಿಂ ವ್ಯಕ್ತಿ ಮುನ್ನಾ ಜೊತೆಗೆ ಓಡಿ ಹೋಗಿದ್ದಾಳೆ. ಈ ಬಗ್ಗೆ ಆಕೆಯ ತಾಯಿ ಮಂಜುಳಾ ಅವರೇ ಮಾಹಿತಿ ನೀಡಿದ್ದು, ತಮ್ಮ ಮಗಳಿಗೆ ಪರಿಚಿತ ಯುವಕನ ಜೊತೆ ವಿವಾಹವಾಗಿತ್ತು. ಆದ್ರೆ ಮಗಳು ನಮ್ಮ ಜೊತೆಯೇ ಇದ್ದಳು. ಆಕೆಯ ಪತಿ ಆಗಾಗ ಬಂದು ಹೋಗುತ್ತಿದ್ದ.
ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ
ಧಾರವಾಡದ ಕೆಲಗೇರಿಯಲ್ಲಿ ಬಾಡಿಗೆ ಮನೆಯಲ್ಲಿದ್ದಾಗ, ತಮಗೆ ವಕೀಲರೊಬ್ಬರು ಪರಿಚಯವಿದ್ದರು. ಅವರ ಕಾರ್ ಡ್ರೈವರ್ ಆಗಿ ಮುನ್ನಾ ಎಂಬಾತ ಕೆಲಸ ಮಾಡ್ತಿದ್ದ. ಆಗ ನಾವು ನಮಗೆ ಸ್ವಂತದೊಂದು ಮನೆ ಮಾಡಬೇಕು. ಹೀಗಾಗಿ ಮನೆ ಹುಡುಕಿ ಕೊಡಿ ಎಂದು ಮುನ್ನಾ ಮತ್ತು ವಕೀಲರಿಗೆ ಹತ್ತು ಲಕ್ಷ ಹಣ ನೀಡಿದ್ದೆವು. ಆ ಬಳಿಕ ವಕೀಲರು ಮತ್ತು ಮುನ್ನಾ ಆಗಾಗ ಮನೆಗೆ ಬಂದು ಹೋಗಿ ಮಾಡುತ್ತಿದ್ದರು. ಆದರೆ 2023ರಲ್ಲಿ ನಾವು ಮನೆಯಲ್ಲಿ ಇಲ್ಲದ ಸಂದರ್ಭ ಮುನ್ನಾ ತಮ್ಮ ಮಗಳನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಧಾರವಾಡದ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೆವು. ಆಗ ಪೊಲೀಸರು ಮುನ್ನಾ ವಿರುದ್ದ ದೂರು ದಾಖಲಿಸಿಕೊಳ್ಳದೇ ಕೇವಲ ಮಿಸ್ಸಿಂಗ್ ಕಂಪ್ಲೇಟ್ ದಾಖಲಿಸಿಕೊಂಡಿದ್ದರು. ಆದ್ರೆ ಇಲ್ಲಿವರಗೆ ಮುನ್ನಾ ಮತ್ತು ತಮ್ಮ ಮಗಳು ಎಲ್ಲಿದ್ದಾರೆ ಎಂದು ಹುಡುಕಿಲ್ಲ ಎಂದು ಆರೋಪಿಸಿದ್ದಾರೆ.

ಇನ್ನು ಮುನ್ನಾಗೆ ಬೆಳಗಾವಿ ಜಿಲ್ಲೆಯ ರಾಮದುರ್ಗದ ಮುಸ್ಲಿಂ ಯುವತಿ ಜೊತೆ ಈ ಹಿಂದೆಯೇ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಮಕ್ಕಳು ಕೂಡಾ ಇದ್ದಾರೆ, ಹೀಗಿದ್ದರೂ ಹೆಂಡತಿ ಮಕ್ಕಳನ್ನು ಬಿಟ್ಟು ಮುನ್ನಾ ತಂಗೆಮ್ಮಳನ್ನು ಕರೆದುಕೊಂಡು ನಾಪತ್ತೆಯಾಗಿದ್ದಾನೆ. ಆತನಿಗಾಗಿ ಆರಂಭದಲ್ಲಿ ಪೊಲೀಸರು ಅನೇಕ ಕಡೆ ಹುಡುಕಾಡಿದ್ದರು. ಹೈದರಾಬಾದ್ ಸೇರಿದಂತೆ ಅನೇಕ ಕಡೆ ಹುಡುಕಾಟ ನಡೆಸಿದ್ದರು. ಆದ್ರೆ ಆತ ಸಿಮ್ ಬದಲಾವಣೆ ಮಾಡಿದ್ದು, ಕುಟುಂಬದವರ ಸಂಪರ್ಕ ಕೂಡ ಇಟ್ಟುಕೊಂಡಿಲ್ಲ. ಹೀಗಾಗಿ ಮುನ್ನಾ ಮತ್ತು ತಂಗೆಮ್ಮಾ ಎಲ್ಲಿದ್ದಾರೆಂದು ಪತ್ತೆ ಮಾಡೋದು ಪೊಲೀಸರಿಗೂ ಸಾಧ್ಯವಾಗಿಲ್ಲ.

ಮುನ್ನಾ ಮೇಲೆ ದೆಹಲಿಯಲ್ಲಿ ಅತ್ಯಾಚಾರ ಪ್ರಕರಣ ಕೂಡಾ ಇರೋದು ಗೊತ್ತಾಗಿದ್ದು, ಆತ ಕ್ರಿಮಿನಲ್ ಹಿನ್ನೆಲೆಯಳ್ಳ ವ್ಯಕ್ತಿ ಎಂಬುದು ಬಹಿರಂಗಗೊಂಡಿದೆ. ಇದೀಗ ತಮ್ಮ ಮಗಳನ್ನು ಹುಡುಕಿ ಕೊಡುವಂತೆ ಧಾರವಾಡ ಸಬ್ ಅರ್ಬನ್ ಪೊಲೀಸರಿಗೆ ಹತ್ತಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗದ ಕಾರಣ ಹಿಂದೂಪರ ಸಂಘಟನೆಗಳ ಜೊತೆ ಆಗಮಿಸಿ ಪೊಲೀಸ್ ಕಮಿಷನರ್ಗೆ ಮಂಜುಳಾ ದೂರು ನೀಡಿದ್ದಾರೆ.