ಇನ್‌ಸ್ಟಾಗ್ರಾಮ್‌ನಲ್ಲಿ ರಶ್ಮಿಕಾರನ್ನು ಫಾಲೋ ಮಾಡದ ವಿಜಯ್ ದೇವರಕೊಂಡ! ಅಚ್ಚರಿಪಟ್ಟ ನೆಟಿಜಿನ್ಸ್

ಹೈದರಾಬಾದ್: ತೆಲುಗು ಚಿತ್ರರಂಗದ ಸ್ಟಾರ್ ಜೋಡಿಗಳೆಂದೇ ಬಿಂಬಿತವಾಗಿರುವ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸುದ್ದಿಯಾಗಿರುವುದು ಇವರಿಬ್ಬರ ಸಿನಿಮಾಗಳಿಗಿಂತ ಹೆಚ್ಚಾಗಿ ಇನ್‌ಸ್ಟಾಗ್ರಾಮ್‌ನಲ್ಲಿನ ಇವರ ಚಟುವಟಿಕೆ. ವಿಜಯ್ ದೇವರಕೊಂಡ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಫಾಲೋ ಮಾಡುತ್ತಿಲ್ಲ ಎಂಬ ವಿಚಾರ ಇಂಟರ್ನೆಟ್‌ನಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ನೆಟ್ಟಿಗರು ವಿಜಯ್ ದೇವರಕೊಂಡ ಅವರ ಇನ್‌ಸ್ಟಾಗ್ರಾಮ್ ಪ್ರೊಫೈಲ್ ಅನ್ನು ಗಮನಿಸಿದಾಗ, ಅವರು ರಶ್ಮಿಕಾರನ್ನು ಫಾಲೋ ಮಾಡುತ್ತಿಲ್ಲ ಎಂಬುದು ಬಯಲಾಗಿದೆ. ಇವರಿಬ್ಬರು ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುವುದು ಮತ್ತು ಪ್ರವಾಸಗಳಿಗೆ ತೆರಳುವ ಫೋಟೋಗಳು ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ, ಈ ವಿಷಯ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

Vijay Deverakonda does not follow Rashmika Mandanna on Instagram

ವಿಜಯ್ ಅವರು ಸೋಷಿಯಲ್ ಮೀಡಿಯಾ ವಿಚಾರದಲ್ಲಿ ಕಟ್ಟುನಿಟ್ಟಾದ ಕೆಲವು ನಿಯಮಗಳನ್ನು ಪಾಲಿಸುತ್ತಾರೆಯೇ ಎಂಬ ಪ್ರಶ್ನೆಗಳು ಎದ್ದಿವೆ. ಏಕೆಂದರೆ ವಿಜಯ್ ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋ ಮಾಡುತ್ತಿರುವುದು ಬೆರಳಣಿಕೆಯಷ್ಟು ಜನರನ್ನು ಮಾತ್ರ. ಸೋಷಿಯಲ್ ಮೀಡಿಯಾ ಫಾಲೋಯಿಂಗ್‌ಗೂ ಅವರ ವೈಯಕ್ತಿಕ ಸಂಬಂಧಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೆಲ ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

 

error: Content is protected !!