
ಮಂಗಳೂರು: ದ್ವಿತೀಯ ಪಿಯು ಫಲಿತಾಂಶ ಇಂದು(ಎ.09) ಮಧ್ಯಾಹ್ನ 3ಕ್ಕೆ ಪ್ರಕಟವಾಗಲಿದ್ದು, ಇದೇ ಮೊದಲ ಬಾರಿ ಫಲಿತಾಂಶದ ಜತೆಗೇ ಅಂಕಪಟ್ಟಿಯನ್ನೂ ಡಿಜಿಲಾಕರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಫಲಿತಾಂಶವನ್ನು https://karresults.nic.in ಜಾಲತಾಣ ಮೂಲಕ ಅಥವಾ ಡಿಜಿಲಾಕರ್ ಆ್ಯಪ್ ಮೂಲಕವೂ ಪಡೆಯುಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್, ಎಸ್‌ಎಂಎಸ್ ಮೂಲಕವೂ ಫಲಿತಾಂಶವನ್ನು ರವಾನಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಮಾಹಿತಿ ನೀಡಿದ್ದಾರೆ.

2025–26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ–1 ಫೆ.28ರಿಂದ ಆರಂಭವಾಗಿ ಮಾರ್ಚ್ 17ರವರೆಗೆ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದರು. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.
