ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಶರಣು

ಬ್ರಹ್ಮಾವರ: ತಾಲೂಕಿನ ಕಾಡೂರು ಗ್ರಾಮದ ತಂತ್ರಾಡಿ ಸಮೃದ್ಧಿ ನಿಲಯದಲ್ಲಿ ವಾಸಿಸುತ್ತಿದ್ದ ವೃದ್ಧ ಮಹಿಳೆಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ರುಕ್ಮಿಣಿ ಜಿ.ಕೆ ಭಟ್‌(80) ಆತ್ಮಹತ್ಯೆಗೆ ಶರಣಾದ ವೃದ್ಧ ಮಹಿಳೆ .

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ರುಕ್ಮಿಣಿಯವರು ಕಳೆದ ಆರು ವರ್ಷಗಳಿಂದ ಸೋಡಿಯಂ ಕೊರತೆಯಿಂದ ಬಳಲುತ್ತಿದ್ದು, ಇದರಿಂದಾಗಿ ಆಗಾಗ ತಲೆ ತಿರುಗಿ ಬೀಳುವ ಸಮಸ್ಯೆಯಿಂದ ನರಳುತ್ತಿದ್ದರು ಎಂದು ತಿಳಿದು ಬಂದಿದೆ. ಆರೋಗ್ಯ ಸಮಸ್ಯೆಯಿಂದ ಮನನೊಂದು ಅವರು ಮನೆಯ ತೋಟದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!