
ಶಿವಮೊಗ್ಗ: ಹುಲಿಕಲ್ ಘಾಟ್‌ನ ಹೇರ್ ಪಿನ್ ಕ್ರಾಸ್ ನಲ್ಲಿ ಕಾಂಕ್ರೀಟ್ ವಾಲ್ ದುರಸ್ತಿ ವೇಳೆ ಭೂ ಕುಸಿತ ಸಂಭವಿಸಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಇಂದು (ಏ.10) ಮುಂಜಾನೆ 3 ಗಂಟೆ ಸುಮಾರಿಗೆ ಕಾರ್ಮಿಕ ಶಬ್ಬೀರ್(40) ಮೃತದೇಹ ಪತ್ತೆಯಾಗಿದ್ದು, ಈ ಅವಘಡದಲ್ಲಿ ಕಾಮಗಾರಿ ಮೇಲ್ವಿಚಾರಕ ಚಕ್ಕಾರು ಗ್ರಾಮದ ರಾಘು(37), ಹಾವೇರಿ ಜಿಲ್ಲೆಯ ನೆಲಗಲು ಗ್ರಾಮದ ರಾಜು(30) ಎಂಬವರು ಸಾವನ್ನಪ್ಪಿದ್ದರು.
ಮೂರು ಮೃತದೇಹಗಳನ್ನು ನಗರದ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ದುರಂತದಲ್ಲಿ ಗಾಯಗೊಂಡ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.