ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಡವಟ್ಟು: ಹಿಂದಿ ಥಿಯರಿ ಪರೀಕ್ಷೆಯಲ್ಲಿ 80ಕ್ಕೆ 94 ಅಂಕ ನೀಡಿದ ಪಿಯು ಬೋರ್ಡ್‌!

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿದ್ಯಾರ್ಥಿಯೊಬ್ಬನಿಗೆ ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗೆ 100 ಅಂಕಗಳಿಗೆ 111 ಅಂಕವನ್ನು ನೀಡಿ ಪಾಸ್‌ ಮಾಡಲಾಗಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಅಂಕಪಟ್ಟಿಯಲ್ಲಿರುವ ನೋಂದಣಿ ಸಂಖ್ಯೆಯನ್ನು ಹಾಕಿ ಫಲಿತಾಂಶವನ್ನು ಪರಿಶೀಲಿಸಿದಾಗಲೂ ಈಗಲೂ ವೆಬ್‌ಸೈಟ್‌ನಲ್ಲಿ 111 ಅಂಕವನ್ನೇ ತೋರಿಸುತ್ತಿದೆ.

80 ಅಂಕದಲ್ಲಿ ನಡೆಯುವ ಹಿಂದಿ ವಿಷಯ ಥಿಯರಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗೆ 94 ಅಂಕ ಬಂದಿದ್ದು ಹೇಗೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.

ಈ ವಿದ್ಯಾರ್ಥಿಯದ್ದು ಮಾತ್ರ ಅಲ್ಲ ಅನೇಕ ವಿದ್ಯಾರ್ಥಿಗಳ ಫಲಿತಾಂಶವನ್ನು ತಪ್ಪಾಗಿ ಪ್ರಕಟಿಸಿದೆ. 6 ವಿಷಯದಲ್ಲೂ 100 ಕ್ಕಿಂತ ಹೆಚ್ಚು ಅಂಕವನ್ನು ನೀಡಲಾಗಿದೆ. ಓರ್ವ ವಿದ್ಯಾರ್ಥಿಗೆ 600 ಅಂಕಕ್ಕೆ 683 ಅಂಕಗಳನ್ನು ನೀಡಲಾಗಿದೆ. ಅಂಕ ಉತ್ತಮಪಡಿಸಿಕೊಳ್ಳಲು ಮರು ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶದಲ್ಲೂ ತಪ್ಪಾಗಿದೆ.

ಈ ಪೈಕಿ ಡಿಜಿಲಾಕರ್‌ನಲ್ಲಿ ಕೆಲವರ ಅಂಕಪಟ್ಟಿ ಸರಿಯಾಗಿ ಬಂದಿದ್ದರೆ ವೆಬ್‌ಸೈಟ್‌ನಲ್ಲಿ ತಪ್ಪಾಗಿದೆ. ಜವಾಬ್ದಾರಿಯುತವಾಗಿ ಫಲಿತಾಂಶ ಪ್ರಕಟಿಸಬೇಕಾದ ಬೋರ್ಡ್‌ ಈ ರೀತಿಯ ತಪ್ಪು, ತಪ್ಪು ಫಲಿತಾಂಶವನ್ನು ಪ್ರಕಟಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಮೂಡಿಸುತ್ತಿದೆ.

error: Content is protected !!