ಕುಂಭಮೇಳ ವೈರಲ್ ಸ್ಟಾರ್ ಮೊನಾಲಿಸಾ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನವದೆಹಲಿ: ಇತ್ತೀಚಿಗಷ್ಟೇ ಪ್ರಯಾಗ್‌ರಾಜ್‌ನಲ್ಲಿ ನಡೆದಿದ್ದ ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಾ ತನ್ನ ಕಣ್ಣುಗಳಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದ ಮೊನಾಲಿಸಾ 2026ರ ಮಾರ್ಚ್ 11ರಂದು ಕೇರಳದ ಪೂವಾರ್‌ನ ಅರುಮಾನೂರ್ ನೈನಾರ್ ದೇಗುಲದಲ್ಲಿ ತನ್ನ ಪ್ರಿಯಕರ ಫರ್ಮಾನ್ ಖಾನ್ ಜೊತೆ ಮದುವೆಯಾಗಿದ್ದರು. ಇದೀಗ ಆಘಾತಕಾರಿ ವಿಚಾರವೊಂದು ಹೊರಬಿದ್ದಿದ್ದು, ಮೊನಾಲಿಸಾ ಮದುವೆ ಸಂದರ್ಭದಲ್ಲಿ ಅಪ್ರಾಪ್ತೆಯಾಗಿದ್ದಳು ಎಂದು ತಿಳಿದುಬಂದಿದೆ. ಈ ಸಂಬಂಧ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಮಹೇಶ್ವರ ಪೊಲೀಸ್ ಠಾಣೆಯಲ್ಲಿ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಮೊನಾಲಿಸಾ ಹಾಗೂ ಫರ್ಮಾನ್ ಖಾನ್ ಮದುವೆಯಾದ ಸಂದರ್ಭದಲ್ಲಿ ಲವ್ ಜಿಹಾದ್, ಅವರ ವಯಸ್ಸು ಸೇರಿದಂತೆ ಹಲವು ಪ್ರಶ್ನೆಗಳು ಮುನ್ನೆಲೆಗೆ ಬಂದಿದ್ದವು. ಇದನ್ನೇ ಆಧಾರವಾಗಿಟ್ಟುಕೊಂಡು NCST ಕೇರಳ ಮತ್ತು ಮಧ್ಯಪ್ರದೇಶದಲ್ಲಿ ವಿಸ್ತಾರವಾದ ತನಿಖೆ ಆರಂಭಿಸಿತ್ತು.

ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ ಅಂತರ್ ಸಿಂಗ್ ಆರ್ಯ ಅವರು ನಡೆಸಿದ ವಿಚಾರಣೆಯ ಸಂದರ್ಭದಲ್ಲಿ ಈ ವಿಚಾರ ಬಯಲಾಗಿದೆ. ಮೊನಾಲಿಸಾ ಪಾರ್ಧಿ ಬುಡಕಟ್ಟು ಜನಾಂಗಕ್ಕೆ ಸೇರಿದ್ದು, ಮದುವೆ ಸಂದರ್ಭದಲ್ಲಿ ಅವರಿಗೆ 18 ವರ್ಷ ತುಂಬಿರಲಿಲ್ಲ, ಅಪ್ತಾಪ್ರೆಯಾಗಿದ್ದರು. ಇನ್ನೂ ಮಹೇಶ್ವರದಲ್ಲಿನ ಆಸ್ಪತ್ರೆ ದಾಖಲೆಗಳ ಪ್ರಕಾರ ಮೊನಾಲಿಸಾ 2009, ಡಿಸೆಂಬರ್ 30ರಂದು ಜನಿಸಿದ್ದು, 2026ರ ಮಾರ್ಚ್ 11ರಂದು ಮದುವೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮೊನಾಲಿಸಾಗೆ ಕೇವಲ 16 ವರ್ಷ ವಯಸ್ಸಾಗಿತ್ತು ಎಂದು ತಿಳಿದುಬಂದಿದೆ.

ಇನ್ನೂ ಕೇರಳದಲ್ಲಿ ಮದುವೆಯಾಗುವಾಗ ಮೊನಾಲಿಸಾಗೆ 18 ವರ್ಷ ತುಂಬಿದೆ ಎಂದು ತೋರಿಸಲು ನಕಲಿ ಜನನ ಪ್ರಮಾಣಪತ್ರ ಬಳಸಿದ್ದಾರೆ. ಹೀಗಾಗಿ ದೇವಾಲಯದ ಅಧಿಕಾರಿಗಳು ಒದಗಿಸಿದ ದಾಖಲೆಯನ್ನಿಟ್ಟುಕೊಂಡು ಮದುವೆ ಮಾಡಿಸಿದ್ದಾರೆ. ಜೊತೆಗೆ ನಕಲಿ ದಾಖಲೆಗಳ ಆಧಾರದ ಮೇಲೆ ಕೇರಳದ ಸ್ಥಳೀಯ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮದುವೆಯನ್ನು ನೋಂದಣಿ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಬಳಿಕ ಪೊಲೀಸರು ಫರ್ಮಾನ್ ಖಾನ್ ವಿರುದ್ಧ ಬಿಎನ್‌ಎಸ್ ಸೆಕ್ಷನ್ ಪೋಕ್ಸೊ ಕಾಯ್ದೆ, ಎಸ್‌ಸಿ/ಎಸ್‌ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈ ಪ್ರಕರಣದಲ್ಲಿ ಯಾವುದಾದರೂ ಸಂಸ್ಥೆ ಹಾಗೂ ವ್ಯಕ್ತಿಗಳು ಭಾಗಿಯಾಗಿದ್ದಾರಾ ಎಂದು ತನಿಖೆ ನಡೆಸಬೇಕಿದೆ. ಇನ್ನೂ ಎನ್‌ಸಿಎಸ್‌ಟಿ ಕೇರಳ ಮತ್ತು ಮಧ್ಯಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ಸಮನ್ಸ್ ಜಾರಿ ಮಾಡಿದ್ದು, ಏ.22ರಂದು ನವದೆಹಲಿಯ ಆಯೋಗದ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

error: Content is protected !!