
ಬಂಟ್ವಾಳ: ಯುವ ನಿರೂಪಕನೋರ್ವ ಮದರಂಗಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ(ಏ.10) ರಾತ್ರಿ ನಡೆದಿದೆ.
ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿಥ್ ( 32) ಮೃತಪಟ್ಟ ವ್ಯಕ್ತಿ.

ನಾಯಿಲದ ಸಂಬಂಧಿಕರ ಮನೆಯಲ್ಲಿ ಮದರಂಗಿ ಕಾರ್ಯಕ್ರಮದ ನಿರೂಪಣೆಗಾಗಿ ತೆರಳಿದ್ದ ಅಶ್ವಿಥ್ ವೇದಿಕೆ ಹತ್ತಿ ಕಾರ್ಯಕ್ರಮ ಪ್ರಾರಂಭಿಸುತ್ತಿದ್ದಂತೆ ಹಠಾತ್ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

ಕೂಡಲೇ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.