ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ; ಸ್ಥಳದಲ್ಲೇ ಮಹಿಳೆ ಸಾ*ವು

ಕುಂದಾಪುರ: ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ(ಏ.10) ಬೀಜಾಡಿ ಡಿವೈಡರ್ ಬಳಿ ನಡೆದಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ವಡ್ಡರ್ಸೆ ನೀರುಕೊಡ್ಲು ನಿವಾಸಿ ಶಾರದಾ(55) ಮೃತ ಮಹಿಳೆ.

ಶಾರದಾ ಅವರು ಕೋಟೇಶ್ವರ ಅಂಕದಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಸ್ಕೂಟಿಯನ್ನು ಅವರ ಮಗ ಚಾಲನೆ ಮಾಡುತ್ತಿದ್ದು, ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಮಗ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

error: Content is protected !!