CET ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏ.23 ಮತ್ತು 24ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ ಹಾಗೂ ಏ.22ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರವೇಶ ಪತ್ರ ಬಿಡುಗಡೆ ಮಾಡಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ, ನಿಗದಿತ ಲಿಂಕ್ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಪ್ರವೇಶ ಪತ್ರದ ಜೊತೆಗೆ ಅಭ್ಯರ್ಥಿಗಳಿಗೆ ನೀಡಲಾಗುವ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಹಾಗೂ ಮಾರ್ಗದರ್ಶನಗಳನ್ನು/ಕಾರ್ಯವಿಧಾನಗಳನ್ನು ತಪ್ಪದೇ ಅನುಸರಿಸಲು ಸೂಚಿಸಲಾಗಿದೆ. ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆಯನ್ನು ಬೆಂಗಳೂರು, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುತ್ತದೆ ಎಂದು ವಿವರಿಸಿದ್ದಾರೆ.

error: Content is protected !!