
ಬೆಂಗಳೂರು: ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಈ ಕುರಿತು ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.

ವಂದೇ ಭಾರತ್ ಸ್ಲೀಪರ್ ರೈಲಿಗೆ ಸಂಸದ ಪಿ.ಸಿ.ಮೋಹನ್ ಬೇಡಿಕೆ ಇಟ್ಟಿದ್ದರು. ಸಂಸದರಿಗೆ ಪತ್ರ ಬರೆದು ಹೊಸ ಟ್ರೈನ್‌ಗೆ ಅನುಮತಿ ಸಿಕ್ಕ ಬಗ್ಗೆ ಅಶ್ವಿನಿ ವೈಷ್ಣವ್ ಮಾಹಿತಿ ಕೊಟ್ಟಿದ್ದಾರೆ.

ಡಿಸೆಂಬರ್ 2 ರಂದು ನೈಋತ್ಯ ರೈಲ್ವೆಯ(SWR) ಸ್ಥಾಯಿ ಸಮಿತಿಯ ಅಧ್ಯಯನ ಭೇಟಿಯ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಈ ವಿಷಯವನ್ನು ಪ್ರಸ್ತಾಪಿಸಿದ್ದರು. SMVT ಬೆಂಗಳೂರು ಮೂಲ/ಅಂತ್ಯ ನಿಲ್ದಾಣವಾಗಿ ವಂದೇ ಭಾರತ್ ಸ್ಲೀಪರ್ ರೈಲಿಗೆ ಅವರು ಒತ್ತಾಯಿಸಿದ್ದರು.

ಈಗ ಇರುವ ರೈಲುಗಳು 24-30 ಗಂಟೆಗಳನ್ನು ತೆಗೆದುಕೊಳ್ಳುತ್ತವೆ. ಆದರೆ, ಬಸ್‌ಗಳು 16-18 ಗಂಟೆಗಳನ್ನು ತೆಗೆದುಕೊಳ್ಳುತ್ತವೆ. ನಮಗೆ ಬಸ್‌ನಷ್ಟು ವೇಗದ ರೈಲು ಬೇಕು ಎಂದು ತಿಳಿಸಿದ್ದರು.