ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರ ಹ*ತ್ಯೆ

ಧಾರವಾಡ: ನಗರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್‌ ಅವರನ್ನು ದುಷ್ಕರ್ಮಿಗಳು ಮನೆಗೆ ನುಗ್ಗಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ(ಏ.10) ತಡರಾತ್ರಿ ನಡೆದಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಫೈರೋಜ್‌ ಪಠಾಣ್‌ ವಾಸವಿದ್ದ ಧಾರವಾಡದ ಹಾಶ್ಮಿನಗರದ ಮನೆಗೆ ಏಕಾಏಕಿ ನುಗ್ಗಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ಕೂಡಲೇ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.

ರಾಜಕೀಯ ಪ್ರೇರಿತವಾದ ಹತ್ಯೆ ಎಂದು ಫೈರೋಜ್ ಮನೆಯವರು ಆರೋಪಿಸಿದ್ದಾರೆ. ಘಟನೆ ನಡೆದ ಸ್ಥಳದ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಹು-ಧಾ ನಗರ ಪೊಲೀಸ್ ಕಮಿಷನ‌ರ್ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಕೊಲೆಯನ್ನು ನೋಡಿರುವ ಪ್ರತ್ಯಕ್ಷದರ್ಶಿಗಳು ಹಾಗೂ ಅವರ ಕುಟುಂಬ ಸದಸ್ಯರ ಮಾಹಿತಿ ಪಡೆಯುತ್ತಿದ್ದು, ಆರೋಪಿಗಳು ಯಾರು ಎಂಬ ಸುಳಿವು ಸಿಕ್ಕಿರುವ ಹಿನ್ನೆಲೆ ನಮ್ಮ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಕಮಿಷನ‌ರ್ ಎನ್. ಶಶಿಕುಮಾ‌ರ್ ತಿಳಿಸಿದ್ದಾರೆ.

error: Content is protected !!