ಪೊಲೀಸರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂಟೇನರ್ ಲಾರಿಗೆ ಢಿಕ್ಕಿ: 32 ಮಂದಿಗೆ ಗಾಯ

ಕೇರಳ: ಬಸ್ಸೊಂದು ಕಂಟೇನರ್ ಲಾರಿಗೆ ಢಿಕ್ಕಿ ಹೊಡೆದ ಘಟನೆ ಕೇರಳದ ಕೊಯ್ಲಾಂಡಿಯಲ್ಲಿ ಇಂದು(ಏ.11) ಮಧ್ಯಾಹ್ನ 12.30ರ ಸುಮಾರಿಗೆ ನಡೆದಿದ್ದು, ಢಿಕ್ಕಿಯ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಂತಹ 27 ಮಂದಿ ಪೊಲೀಸರು ಹಾಗೂ ಇತರ 5 ಮಂದಿ ನೌಕರರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಚುನಾವಣಾ ಕರ್ತವ್ಯ ಮುಗಿಸಿ ತಮ್ಮ ಸ್ಥಳಗಳಿಗೆ ಹಿಂತಿರುಗುತ್ತಿದ್ದ ಮಲಬಾರ್ ವಿಶೇಷ ಪೊಲೀಸ್(ಎಂಎಸ್‌ಪಿ) ಸಿಬ್ಬಂದಿಯನ್ನು ಬಸ್ ಹೊತ್ತೊಯ್ಯುತ್ತಿತ್ತು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊಯ್ಲಾಂಡಿಯ ಕೊಲ್ಲಂ ಬಳಿ ಬಸ್ ಕಂಟೇನರ್ ಲಾರಿಗೆ ಢಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

error: Content is protected !!